ಪಡಿತರದಾರರ ಇ-ಕೆವೈಸಿ ತಾತ್ಕಾಲಿಕ ಸ್ಥಗಿತಕ್ಕೆ ಸರ್ಕಾರದ ಸುತ್ತೋಲೆ

ಕಾರವಾರ: ಪಡಿತರದಾರರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸಲಾಗುತ್ತಿದ್ದ ಇ-ಕೆವೈಸಿ ಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.

ಪಡಿತರ ವಿತರಣೆಯಲ್ಲಿ ನಡೆಯುವ ಅವ್ಯವಹಾರ ತಡೆಯುವ ದೃಷ್ಟಿಯಿಂದ ರಾಜ್ಯ ಸರಕಾರ ಪಡಿತರ ಚೀಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರೂ ಜು. 31ರೊಳಗೆ ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಸುವಂತೆ ಕಳೆದ ಮೇ 16ರಂದು ಸುತ್ತೋಲೆ ಹೊರಡಿಸಿತ್ತು. ಅದರಂತೆ ರಾಜ್ಯಾದ್ಯಂತ ಪಡಿತರ ಚೀಟಿದಾರರ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆನ್‍ಲೈನ್ ಮೂಲಕ ಸಂಗ್ರಹಿಸಲಾಗುತ್ತಿತ್ತು.

ಆದರೆ ಗುರುವಾರ ಬೆಂಗಳೂರಿನ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿ ಸರಕಾರದ ನಿರ್ದೇಶನದಂತೆ ಇ-ಕೆವೈಸಿಯ ನೋಂದಣಿಯನ್ನು ಜುಲೈ 15 ರವರೆಗೆ ನ್ಯಾಯಬೆಲೆ ಅಂಗಡಿ ಹಂತದಲ್ಲಿ ಸಂಗ್ರಹಿಸುವುದನ್ನು ನಿಲ್ಲಿಸಲಾಗಿದೆ ಎಂದು ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.