ವಿಶ್ವಕಪ್ 2019: ಇಂದು ಭಾರತಕ್ಕೆ ಅಫ್ಘಾನಿಸ್ತಾನ ಎದುರಾಳಿ

ಸ್ಪೊರ್ಟ್ಸ್: ಐಸಿಸಿ ವಿಶ್ವಕಪ್ 2019 ರ ಟೂರ್ನಿಯ ಜೂ.22ರ ಇಂದಿನ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.

ಸೌಥಾಂಪ್ಟನ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಇವೆರಡು ತಂಡ ಎದುರಾಗಲಿದೆ. ವಿಶ್ವಕಪ್ ಟೂರ್ನಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ 3 ರಲ್ಲಿ ಗೆದ್ದು ಬೀಗುತ್ತಿರುವ ಭಾರತ,  ವಿಶ್ವಕಪ್ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ. ಈ ಪಂದ್ಯಲ್ಲಿ ಗೆದ್ದು, ವಿಶ್ವಕಪ್ ನ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಡಲು ಬಯಸಿದೆ. ಜೊತೆಗೆ ಈ ಪಂದ್ಯದ ಗೆಲುವಿನೊಂದಿಗೆ ವಿಶ್ವಕಪ್ ಟೂರ್ನಿಯಲ್ಲಿ 50 ಜಯ ಕಂಡ 3 ನೇ ತಂಡ ಎನಿಸಲಿದೆ. ಅತ್ತ ದುರ್ಬಲ ಅಪ್ಘಾನಿಸ್ತಾನ ತಂಡ ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಸೋತು, ಈ ಪಂದ್ಯದಲ್ಲಾದರೂ ಚೇತರಿಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಎತ್ತರಕ್ಕೆ ಜಿಗಿಯುವ ಕನಸಿನಲ್ಲಿದೆ.

ಇನ್ನು ಸ್ನಾಯು ಸೆಳೆತದ ಕಾರಣಕ್ಕಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಹೊರನಡೆದಿದ್ದ ಭುವನೇಶ್ವರ್ ಇಂದಿನ ಪಂದ್ಯಕ್ಕೆ ಲಭ್ಯರಿಲ್ಲ. ಅವರ ಬದಲು ಮೊಹಮದ್ ಶಮಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಅಫ್ಘಾನಿಸ್ತಾನ ತಂಡಕ್ಕೆ ರಶೀದ್ ಖಾನ್, ಮೊಹಮದ್ ನಬಿ, ಮುಜೀಬ್ ಉರ್ ರೆಹಮಾನ್ ರ ಸ್ಪಿನ್ ಪ್ರಮುಖ ಅಸ್ತ್ರವಾಗಿವೆ.

ಮತ್ತೊಂದು ಪಂದ್ಯ: ಮ್ಯಾಂಚೆಸ್ಟರ್ ಮೈದಾನದಲ್ಲಿ ಸಂಜೆ 6 ಗಂಟೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಬಲಿಷ್ಠ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.

ಜೂ.21 ರ ಶ್ರೀಲಂಕಾ ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ತಂಡವು 20 ರನ್ ಗಳ ಅಂತರದಿಂದ ಜಯಶಾಲಿಯಾಗಿದೆ.

Categories: ಸಿನಿ-ಕ್ರೀಡೆ

Leave A Reply

Your email address will not be published.