ಜು. 6ಕ್ಕೆ ಪತ್ರಿಕಾ ದಿನಾಚರಣೆ- ಪ್ರಶಸ್ತಿ ಪ್ರದಾನ, ಸಮ್ಮಾನ ಕಾರ್ಯಕ್ರಮ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಹಾಗೂ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಭಟ್ಕಳ ಇವರ ಸಹಯೋಗದಲ್ಲಿ 2019 ನೇ ಸಾಲಿನ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಷ್ಠಿತ ಕೆ.ಶ್ಯಾಮರಾವ್ ಹಾಗೂ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಸಮ್ಮಾನ ಕಾರ್ಯಕ್ರಮವನ್ನು ಜು.6 ರಂದು ಮುರುಡೇಶ್ವರ ಆರ್.ಎನ್.ಎಸ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಇಲ್ಲಿನ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯಕರ್ತ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಭಟ್ಕಳ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ನೀಡಲಾಗುವ ಕೆ.ಶ್ಯಾಮರಾವ್ ಪ್ರಶಸ್ತಿಯನ್ನು ಸುಮುಖ ಟಿವಿ ಪ್ರಧಾನ ಸಂಪಾದಕ ಜಿ‌.ಸುಬ್ರಾಯ ಭಟ್ ಭಟ್ಕಳ ಹಾಗೂ ಅಜ್ಜೀಬಳ ದತ್ತಿನಿಧಿ ಪುಸ್ಕಾರವನ್ನು ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರಸಿಂಹ ಸಾತೊಡ್ಡಿ ಅವರಿಗೆ ನೀಡಿಲಾಗುವುದು. ಅದೇ ರೀತಿ ಶಿಕ್ಷಣ ತಜ್ಞ ಎಮ್.ವಿ.ಹೆಗಡೆ ಮುರ್ಡೇಶ್ವರ ಹಾಗೂ ಪತ್ರಿಕಾ ವಿತರಕರಾದ ಆನಂದ ಭಟ್ ಭಟ್ಕಳ ಹಾಗೂ ಮಧು ಕಾಯ್ಕಿಣಿ ಮುರುಡೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಭಟ್ಕಳ ಶಾಸಕ ಸುನೀಲ್ ನಾಯ್ಕ ಉದ್ಘಾಟಿಸಲಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕೆ.ಶ್ಯಾಮರಾವ್ ಪ್ರಶಸ್ತಿ ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಜಯ ಕರ್ನಾಟಕ ಪ್ರದಾನ ಸಂಪಾದಕ ಹರಿಪ್ರಕಾಶ ಕೋಣೆಮನೆ ವಿಶೇಷ ಉಪನ್ಯಾಸಕರಾಗಿ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೊಕೇಶ್ ಹಾಗೂ ಮುರ್ಡೇಶ್ವರದ ಹ್ಯೂಮನ್ ವೆಲ್ ಫೇರ್ ಅಸೋಸಿಯೇಷನ್ ಅಧ್ಯಕ್ಷ ಡಾ.ಅಮೀನುದ್ಧೀನ್ ಗೌಡಾ ಭಾಗವಹಿಸಲಿದ್ದು, ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ ಉಪಸ್ಥಿತಿ ಇರಲಿದೆ ಎಂದು ತಿಳಿಸಿದರು.

ಜಿಲ್ಲಾ ಪತ್ರಿಕಾ ದಿನಾಚರಣೆಯ ಕಾರಣ ಸಂಘದ ಪದಾಧಿಕಾರಿಗಳು, ತಾಲೂಕಾ ಅಧ್ಯಕ್ಷರು, ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕಿದ್ದು, ಪ್ರತಿಯೊಬ್ಬ ಪತ್ರಕರ್ತ, ಸಂಘದ ಸದಸ್ಯರು ಪಾಲ್ಗೊಳ್ಳಬೇಕು ಎಂದು ವಿನಂತಿಸಿಕೊಂಡರು.

ಈ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪ್ರದೀಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ಖಚಾಂಚಿ ಸುಮಂಗಲಾ ಹೊನ್ನೆಕೊಪ್ಪ ಇದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.