ವಿವಿಧ ಯೋಜನೆಯಡಿ ಸಾಲ- ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2019-20ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ, ಪಂಚವೃತ್ತಿ ಸಾಲ, ಮೈಕ್ರೋಕ್ರೆಡಿಟ್, ಅರಿವು ಶೈಕ್ಷಣಿಕ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವವರಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿ ನಮೂನೆಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಹೈ ಚರ್ಚ್ ಹತ್ತಿರ, ಕಾರವಾರ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತಿರ್ಣಾಧಿಕಾರಿಗಳ ಕಛೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜು. 22 ರೊಳಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕಾರವಾರದ ವಿಳಾಸಕ್ಕೆ ಸಲ್ಲಿಸಬೇಕು.

ನಿಗದಿತ ನಮೂನೆಯ ಅರ್ಜಿಯೊಂದಿಗೆ ಫೋಟೊ, ರೇಷನ್‍ಕಾರ್ಡ್ ಪ್ರತಿ, ಆಧಾರ ಪ್ರತಿ, ಜಾತಿ ಆದಾಯ ಪ್ರತಿ, ಬ್ಯಾಂಕ್ ಪಾಸ್‍ಬುಕ್ ಪ್ರತಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ. ಅರ್ಜಿದಾರರ ವಯಸ್ಸು 18 ರಿಂದ 55ರ ಮಿತಿಯಲ್ಲಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 40.000 ರೂ.ಗಳ ಒಳಗೆ ಹಾಗೂ ಪಟ್ಟಣ ಪ್ರದೇಶದವರಿಗೆ 55.000 ರೂ. ಕ್ಕಿಂತಕಡಿಮೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ದೂರವಾಣಿ ಸಂಖ್ಯೆ : 08382-223229 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.