ಚಿತ್ರಕಲಾವಿದರಿಂದ ವಿವಿಧ ಕಲಾ ಚಟುವಟಿಕೆಗೆ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ನಡೆಸುವ ಚಿತ್ರಕಲಾ ಶಿಬಿರ, ಕಾರ್ಯಾಗಾರ, ತಿಂಗಳಚಿತ್ರ, ಕಲಾಪ್ರದರ್ಶನ ಸೇರಿದಂತೆ ಇತರೆ ಕಲಾ ಚಟುವಟಿಕೆ ಕಾರ್ಯಕ್ರಮಗಳಿಗೆ ಆಯ್ಕೆ ಮಾಡಲು ಆಸಕ್ತ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜು. 31 ರೊಳಗಾಗಿ ರಜಿಸ್ಟ್ರಾರ್, ಕರ್ನಾಟಕ ಲಲಿತ ಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ. ಸಿ. ರಸ್ತೆ, ಬೆಂಗಳೂರು-560002, ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.lalitkalakarnataka.org. ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.