ಗೋಕರ್ಣ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ


ಗೋಕರ್ಣ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಕಾರವಾರ ಹಾಗೂ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆಯಿತು.

ಶಿಬಿರದಲ್ಲಿ ಒಟ್ಟು 24 ಜನ ಕಣ್ಣಿನ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಪ್ರಥಮ ಹಂತದಲ್ಲಿ 10 ಜನರನ್ನು ಶಸ್ತ್ರಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ. ನಾಲ್ಕು ವಾರದಲ್ಲಿ ಉಳಿದ ಎಲ್ಲರಿಗೂ ಶಸ್ತ್ರಚಿಕಿತ್ಸೆ ಮಾಡಿಸಿಕೊಡಲಾಗುತ್ತದೆ ಎಂದು ತಿಳಿಸಲಾಗಿದೆ. ಶಿಬಿರವನ್ನು ಡಾ. ನವೀನಕುಮಾರ ಬೆಳವಾಡಿ ನಡಸಿಕೊಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಗದೀಶ ನಾಯ್ಕ, ಮತ್ತು ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.