ಮುಂಡಗೋಡ ಡಿಪ್ಲೊಮಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ: ಮುಂಡಗೋಡ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2019-20ನೇ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಪ್ರವೇಶ ಪಡೆದು ಖಾಲಿ ಉಳಿದಿರುವ ಸೀಟುಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷಗಳ ಐಟಿಐ ಹಾಗೂ ಪಿಯುಸಿ (ವಿಜ್ಞಾನ ಅಥವಾ ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು ಜು. 30 ರೊಳಗೆ ತಾಂತ್ರಿಕ ಶಿಕ್ಷಣ ಇಲಾಖೆ ವೆಬ್‍ಸೈಟ್ www.dte.kar.nic.in  ಇಲ್ಲಿಂದ ಅರ್ಜಿನ ಮೂನೆಯನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.

ಜು.31 ರಂದು ಬೆಳಗ್ಗೆ 10.30 ಕ್ಕೆ ಮೆರಿಟ್ ಪಟ್ಟಿಯನ್ನು ಕಾಲೇಜಿನಲ್ಲಿ ಪ್ರಕಟಿಸಲಿದ್ದು ಅಂದೇ ಮಧ್ಯಾಹ್ನ 2.30ಕ್ಕೆ ಕೌನ್ಸೆಲಿಂಗ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಪ್ರವೇಶ ಪಡೆಯಬಹುದಾಗಿದೆ ಎಂದು ಮುಂಡಗೋಡ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.