ಕುಮಟಾದಲ್ಲಿ ಸೆ.13 ಕ್ಕೆ ಸಾರ್ವಜನಿಕರ ಅಹವಾಲು ಸ್ವೀಕಾರ

ಕುಮಟಾ: ತಾಲೂಕಾ ಪಂಚಾಯತ ಸಭಾಭವನದಲ್ಲಿ ಸೆ.13 ರಂದು ಕಾರವಾರ ಲೋಕಾಯುಕ್ತ ಉಪಸ್ಥಿತಿಯಲ್ಲಿ ಮಧ್ಯಾಹ್ನ 11:30 ರಿಂದ 2 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.

ಸಾರ್ವಜನಿಕರು ಯಾವುದೇ ಇಲಾಖೆಯಿಂದ ತಮ್ಮ ಕೆಲಸಗಳು ಆಗದೇ ಇದ್ದಲ್ಲಿ ಅಥವಾ ವಿಳಂಬವಾಗುತ್ತಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಿ ಚರ್ಚಿಸಬಹುದಾಗಿದೆ. ದೂರು ನೀಡುವವರು ಸಿವಿಲ್ ಹಾಗೂ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಸಾರ್ವಜನಿಕ ಅಥವಾ ಸರ್ಕಾರಿ ನೌಕರರ ಕರ್ತವ್ಯ ಲೋಪಕ್ಕೆ ಸಂಬಂಧಿಸಿ ಅರ್ಜಿ ನಮೂನೆ 1 ಹಾಗೂ 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿಡವಿಟ್ ಮಾಡಿ ಸೂಕ್ತ ದಾಖಲೆಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08382-222202, 222250 ಗೆ ಸಂಪರ್ಕಿಸಬಹುದಾಗಿದೆ ಎಂದು ತಹಸೀಲ್ದಾರ ಮೇಘರಾಜ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.