ಸೀಮೆ ಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ


ಮುಂಡಗೋಡ: ತಾಲೂಕಿನ ನಾಗನೂರ ಗ್ರಾ.ಪಂ. ವ್ಯಾಪ್ತಿಯ ಶಿರಿಗೇರಿ ಗ್ರಾಮದ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಬಯ್ಯಾಬಾಯಿ ಜಾನಕರ(28) ಮೃತಪಟ್ಟ ಮಹಿಳೆ. ಇವರು ಸೆ. 3 ರಂದು ಮನೆಯಲ್ಲಿ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು ಸುಟ್ಟ ಗಾಯಗಳಿಂದ ಅಸ್ವಸ್ಥಳಾದ ಇವರನ್ನು ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.