ವಿವಿಧ ಇಲಾಖೆಗಳ ಜಾಗ ಮಂಜೂರಾತಿಗಾಗಿ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಕಾರವಾರ: ನಗರೀಕರಣ ಜಮೀನಿನಲ್ಲಿ ವಿವಿಧ ಇಲಾಖೆಗಳಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಜಾಗ ಮಂಜೂರಾತಿಗೆ ಸಂಬಂಧಿಸಿದಂತೆ ಜೊಯಿಡಾ ತಾಲೂಕು ತಹಶೀಲ್ದಾರ್ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ ಅವರು ಸಭೆ ನಡೆಸಿ ಪರಿಶೀಲನೆ ಮಾಡಿದರು.

ಜೊಯಿಡಾ ತಾಲೂಕು ಸೇವಾ ಸಹಕಾರಿ ಸಂಘ ಇವರಿಗೆ ಹತ್ತು ಗುಂಟೆ ಜಮೀನು ಮಂಜೂರಾತಿಗೆ ಸಭೆಯಲ್ಲಿ ಚರ್ಚಿಸಿ ಮಂಜೂರಾತಿ ಬಗ್ಗೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅದರಂತೆ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿಗೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ವಸತಿಗೃಹ ನಿರ್ಮಾಣದಕ್ಕಾಗಿ ಸುಮಾರು 5 ಎಕರೆ ಜಮೀನು ಮಂಜೂರಾತಿಗೆ ಸ್ಥಳ ಗುರುತಿಸಿ ಮುಂದಿನ ಸಭೆಯಲ್ಲಿ ಮಂಡಿಸಲು ತಹಶೀಲ್ದಾರ್ ಹಾಗೂ ಜೊಯಿಡಾ ವಿಭಾಗ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಬೇರೆ ಬೇರೆ ಇಲಾಖೆ ಕಟ್ಟಡಗಳಿಗೆ ಜಾಗ ಅವಶ್ಯವಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕೆಂದು ತಿಳಿಸಿದರು. ನಂತರ ಕಂದಾಯ ಇಲಾಖೆಯ ಸಿಬ್ಬಂದಿಗಳ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಮಾಡಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.