ಸೆ. 14 ರಂದು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಹಾಗೂ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸೆ. 14 ರಂದು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ನಡೆಯಲಿದೆ.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತಾಲೂಕು ಪಂಚಾಯತ್ ಅಧ್ಯಕ್ಷೆ ಪ್ರಮಿಳಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸದಸ್ಯರು ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.