ವಡ್ಡಿನಗದ್ದೆ ಶಾಲೆಯಲ್ಲಿ ಪ್ರತಿಭಾ ಕಾರಂಜಿ: ಮಕ್ಕಳ ಪ್ರತಿಭಾ ಪ್ರದರ್ಶನ

ಶಿರಸಿ: ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಹಬ್ಬವಾದ ಪ್ರತಿಭಾ ಕಾರಂಜಿಯ ಹುಲೇಕಲ್ ಕ್ಲಸ್ಟರ್ ಮಟ್ಟದ ಕಾರ್ಯಕ್ರಮ ತಾಲೂಕಿನ ವಡ್ಡಿನಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ವಿದ್ಯಾರ್ಥಿಗಳು ವಿವಿಧ ಭಾಷೆಗಳ ಕಂಠಪಾಠ ಸ್ಪರ್ಧೆ, ಧಾರ್ಮಿಕ ಶ್ಲೋಕ(ಸಂಸ್ಕೃತ ಮತ್ತು ಅರೇಬಿಕ್), ಸುಗಮ ಸಂಗೀತ, ಫ್ಯಾನ್ಸಿ ಉಡುಗೆ, ಚಿತ್ರಕಲೆ, ಕಥೆಯನ್ನು ಹೇಳುವುದು, ಮಣ್ಣಿನ ಆಕೃತಿ ಮಾಡುವುದು, ಯೋಗಾಸನ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು, ಕೋಲಾಟ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಪ್ರತಿಭಾ ಕಾರಂಜಿ ಸರಕಾರದ ಒಂದು ಒಳ್ಳೆಯ ಕಾರ್ಯಕ್ರಮವಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳ ಪಡೆದುಕೊಂಡು ತಮ್ಮಲ್ಲಿರುವ ಪ್ರತಿಭೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕೆಂದು ತಿಳಿಸಿದರು. ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಬಾಲ್ಯದಿಂದಲೇ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೊಂಡ ಪ್ರತಿಭಾ ಕಾರಂಜಿಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ಪ್ರತಿಭಾ ಕಾರಂಜಿ ನೀಡುತ್ತದೆ. ವಿದ್ಯಾರ್ಧಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದರು. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು‌.

ಅಧ್ಯಕ್ಷತೆ ವಹಿಸಿದ್ದ ಇಟಗುಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಭೋವಿ, ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯವಾಗುತ್ತದೆ.
ಇದು ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಕೆ.ಹೆಗಡೆ ಮಣಬಾಗಿ, ಪ್ರಮುಖರಾದ ವಿ.ಜಿ.ಹೆಗಡೆ ಹಾಗೂ ಇತರರು ಇದ್ದರು

Categories: ಜಿಲ್ಲಾ ಸುದ್ದಿ

Leave A Reply

Your email address will not be published.