ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಗಂಭೀರ

ಹೊನ್ನಾವರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅಳ್ವೇಕೋಡಿಯಲ್ಲಿ ನಡೆದಿದೆ.

ಕುಮಟಾದಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಆಗಮಿಸಿದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರರನ್ನು ತಕ್ಷಣ ಸ್ಥಳೀಯರು ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.