ಅ. 11 ರಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಕಾರವಾರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ. 11 ರಂದು ಶುಕ್ರವಾರ ಬೆಳಗ್ಗೆ 10.30 ಕ್ಕೆ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಗೋವಿಂದಯ್ಯ, ಅಧ್ಯಕ್ಷರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ರಾಜೇಂದ್ರ ಬೇಕಲ್ ಹಾಗೂ ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಎಚ್ ನಾಯ್ಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನ್ಯಾಯವಾದಿ ರಾಜೇಶ್ವರಿ ವಿ. ನಾಯ್ಕ, ಕಾರವಾರ ಜಿಲ್ಲಾಸ್ಪತ್ರೆಯ ಮನೋರೋಗ ತಜ್ಞ ಡಾ. ಸರ್ವೇಶ್‍ಕುಮಾರ್ ಎಚ್ ಅತಿಥಿ ಉಪನ್ಯಾಸ ನೀಡಲಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.