ಅ. 13 ರಂದು ಮಹರ್ಷಿ ವಾಲ್ಮಿಕಿ ಜಯಂತಿ

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಹಾಗೂ ನಗರಸಭೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಅ.13 ರಂದು ರವಿವಾರ ಬೆಳಗ್ಗೆ 11 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು.

ಗೌರವ ಉಪಸ್ಥಿತಿಯನ್ನು ವಿಧಾನ ಸಭಾ ಸಭಾಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗೌರವ ಉಪಸ್ಥಿತಿಯಲ್ಲಿ, ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಸಚಿವ ಗೋವಿಂದ್ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆ ವಹಿಸುವರು. ಕಾರವಾರ-ಅಂಕೋಲಾ ವಿಧಾನಸಭೆಯ ಶಾಸಕಿ ರೂಪಾಲಿ ಎಸ್. ನಾಯ್ಕ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.