ಅಧಿಕಾರಕ್ಕಿಂತ ನಮ್ಮ ಕೆಲಸ ಶಾಶ್ವತ: NWKRTC ಅಧ್ಯಕ್ಷ ವಿ.ಎಸ್.ಪಾಟೀಲ


ಮುಂಡಗೋಡ: ಅಧಿಕಾರ ಯಾವತ್ತೂ ಶಾಶ್ವತವಲ್ಲ, ನಾವು ಮಾಡಿದ ಕೆಲಸ ಮಾತ್ರ ಶಾಶ್ವತವಾಗಿ ಉಳಿಯುತ್ತದೆ. ಪಕ್ಷವು ತಮ್ಮ ಪಕ್ಷನಿಷ್ಠೆಯನ್ನು ಗುರುತಿಸಿ ಜವಾಬ್ದಾರಿ ನೀಡಿದೆ. ಅದನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದು ಮಾಜಿ ಶಾಸಕ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನೂತನ ಅಧ್ಯಕ್ಷ ವಿ.ಎಸ್.ಪಾಟೀಲ ಹೇಳಿದರು.

ರಾಜ್ಯ ಸರಕಾರ ಅವರನ್ನು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅವರು ಅಧಿಕಾರ ಯಾವತ್ತೂ ಶಾಶ್ವತವಲ್ಲ, ನಾವು ಮಾಡಿದ ಕೆಲಸ ಮಾತ್ರ ಶಾಶ್ವತವಾಗಿ ಉಳಿಯುತ್ತದೆ ಎಂದರು. ತಾವು ನಿರೀಕ್ಷೆ ಮಾಡಿಯೇ ಇರಲಿಲ್ಲ ಅಧಿಕಾರ ತಾನಾಗಿಯೇ ಹುಡುಕಿಕೊಂಡು ಬಂದಿದೆ. ಅಧಿಕಾರ ತಾನಾಗಿಯೇ ಬಂದರೆ ಅದಕ್ಕೆ ಹೆಚ್ಚು ಗೌರವ ಇರುತ್ತದೆ. ಪಕ್ಷ ತಮಗೆ ಎಲ್ಲವನ್ನು ನೀಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಶಿವರಾಮ ಹೆಬ್ಬಾರ ಅವರಿಗೆ ಉಪ ಚುನಾವಣೆಯಲ್ಲಿ ಪಕ್ಷ ಟಿಕೇಟ್ ನೀಡಿದರೆ ಬೆಂಬಲಿಸಿ ಗೆಲ್ಲಿಸುವುದು ತಮ್ಮ ಜವಾಬ್ದಾರಿಯಾಗಿದೆ. ಅವರನ್ನು ಹೊರತು ಪಡಿಸಿ ಬೇರೆ ಯಾರನ್ನಾದರೂ ಅಭ್ಯರ್ಥಿ ಮಾಡಿದರೆ ತಾವು ಕೂಡಲೇ ಟಿಕೇಟ್ ಆಕಾಂಕ್ಷಿಯೇ ಎಂದು ಪುನರುಚ್ಚರಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.