ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನ

ಕಾರವಾರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹಿಳಾ ತರಬೇತಿ ಯೋಜನೆಯಡಿ 2019-20 ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಸ್ವಯಂ ಸೇವಾ ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅ. 25 ಕೊನೆಯ ದಿನ. ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿ ನೀಡಬಯಸುವ ಸಂಸ್ಥೆಯು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಮತ್ತುಟಿ ಕೇಂದ್ರ ಸರಕಾರದ ಅಧೀನದಲ್ಲಿ ಅಕ್ರಿಡಿಟೇಶನ್ ಪ್ರಮಾಣ ಪತ್ರವನ್ನು ಪಡೆದ ಸಂಸ್ಥೆಯಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.