ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿಯನ್ನು ನೀಡಲು ಜಿಲ್ಲೆಯಲ್ಲಿ ನೆಲೆಸಿರುವ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

2001ರ ಆ. 1 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2019 ನೇ ಸಾಲಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ತಲಾ ರೂ. 10,000 ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗೆ ಆಯ್ಕೆ ಆಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

2019 ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅ. 25 ರೊಳಗಡೆ ತಲುಪುವಂತೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರಇವರಿಗೆ ಕಳುಹಿಸಬೇಕು.

ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.