ಮನ ನೊಂದ ವ್ಯಕ್ತಿ: ನಿದ್ರೆ ಮಾತ್ರೆ ಸೇವಿಸಿ ಆತ್ಮ ಹತ್ಯೆಗೆ ಯತ್ನ

ಮುಂಡಗೋಡ: ಪಟ್ಟಣದ ವ್ಯಕ್ತಿಯೊಬ್ಬ ಮಂಗಳವಾರ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ.

ಆಯುರ್ವೇದ ಔಷಧಿ ಅಂಗಡಿ ಮಾಲೀಕನಾದ ಶಿವಾನಂದ ಚಳಗೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.ಈತನು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಸೋಮವಾರ ಸಂಜೆ ಮನೆಯಿಂದ ಬೈಕ್ ತೆಗೆದುಕೊಂಡು ಹೋಗಿ ಸರಕಾರಿ ಪದವಿಪೂರ್ವ ಕಾಲೇಜಿನ ಕಟ್ಟಡದ ಮೇಲೆ ರಾತ್ರಿ ವೇಳೆ ನಿದ್ರೆಯ ಮಾತ್ರೆಯನ್ನು ಸೇವಿಸಿ ನಂತರ ತಂಪು ಪಾನೀಯ ಸೇವಿಸಿ ಅಲ್ಲಿಯೇ ಮಲಗಿದ್ದಾನೆ.

ಮಂಗಳವಾರ ಬೆಳಗ್ಗೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಈತನನ್ನು ಗಮನಸಿದ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ತಿಳಿಸಿದ್ದಾರೆ. ನಂತರ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸೇರಿ ಈತನನ್ನು ಪಕ್ಕದಲ್ಲಿರುವ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಯತ್ನಿಸಿದ ಕಾರಣ ತಿಳಿದು ಬಂದಿಲ್ಲ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.