ವಿವಿಧ ಬೇಡಿಕೆಗೆ ಒತ್ತಾಯಿಸಿ ಕೃಷಿ ಕೂಲಿಕಾರ ಸಂಘದಿಂದ ಪ್ರತಿಭಟನೆ: ಮನವಿ

ಮುಂಡಗೋಡ: ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲೂಕು ಘಟಕದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಇಲ್ಲಿನ ತಾ.ಪಂ. ಇಒ, ತಹಸೀಲ್ದಾರ್ ಮತ್ತು ಪ.ಪಂ. ಮುಖ್ಯಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಹಂತ ಹಂತವಾಗಿ ಕಡತ ಮಾಡಲು ಹೊರಟಿದೆ. ಕೂಲಿಕಾರರಿಗೆ ಒಂದು ದಿನದ ಕೆಲಸಕ್ಕೆ 350ರೂ.ನಂತೆ ಹೆಚ್ಚಿಸಬೇಕು. ಕೂಲಿ ಮಾಡಿದ ಮೊತ್ತವನ್ನು ಒಂದು ವಾರದೊಳಗೆ ಪಾವತಿಸಬೇಕು. ತಾಲೂಕಿನಲ್ಲಿ ಮ್ಯಾಂಗೋ ಜ್ಯೂಸ್ ಫ್ಯಾಕ್ಟರಿಯನ್ನು ಮಂಜೂರಿ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು ಹೀಗೆ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇದಕ್ಕೂ ಮುನ್ನ ಕೂಲಿಕಾರರು ಪಟ್ಟಣದ ಪರಿವೀಕ್ಷಣಾ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಕೇಂದ್ರ ಮತ್ತುರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳೆಯೊಬ್ಬಳು ಅಸ್ವಸ್ಥಗೊಂಡು ಆಂಬುಲೆನ್ಸ್ ಮೂಲಕ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಘದ ತಾಲೂಕಾಧ್ಯಕ್ಷ ಭೀಮಣ್ಣ ಭೋವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.