ಜಿಲ್ಲೆಯಲ್ಲಿ ಸೆ. 144 ನಿಷೇಧಾಜ್ಞೆ ಜಾರಿ; ಡಿಸಿ ಆದೇಶ

ಕಾರವಾರ: ಐತಿಹಾಸಿಕ ಅಯೋಧ್ಯಾ ರಾಮಜನ್ಮಭೂಮಿ ತೀರ್ಪು ಹೊರಬಿದ್ದ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನ. 9 ಶನಿವಾರ ಬೆಳಿಗ್ಗೆ 10 ರಿಂದ ನ. 10 ಭಾನುವಾರ ಸಂಜೆ 6 ರ ವರೆಗೆ ಕಲಂ 144 ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಈಗಾಗಲೇ ಮತೀಯವಾಗಿ ಮತ್ತು ರಾಜಕೀಯವಾಗಿ ಅತೀ ಸೂಕ್ಷ್ಮಪ್ರದೇಶವಾಗಿದ್ದು, ಈ ಹಿಂದೆ ಮತೀಯ ಗಲಭೆಗಳು ನಡೆದು ಜೀವ ಹಾನಿ, ಸಾರ್ವಜನಿಕ ಸೊತ್ತುಗಳ ಹಾನಿಯಾಗಿ
ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ತೊಡಕು ಉಂಟಾದ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗಿರುತ್ತದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಅಯೋಧ್ಯೆ ವಿವಾದದ ಬಗ್ಗೆ ಅಂತಿಮ ತೀರ್ಪು
ನೀಡಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಘಟನೆಗಳು ನಡೆಯದಂತೆ ಅವುಗಳನ್ನು ತಡೆಗಟ್ಟುವ ಉದ್ದೇಶದಿಂದ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ:144 ರಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಯನ್ನು ಹೊರಡಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.