ಸೆ. 144 ನಿಷೇಧಾಜ್ಞೆ ಅವಧಿಯಲ್ಲಿ ಏನೇನು ಮಾಡಬಾರದು ? ಇಲ್ಲಿದೆ ಮಾಹಿತಿ

ಸೆ. 144 ನಿಷೇಧಾಜ್ಞೆ ಅವಧಿಯಲ್ಲಿ ಏನೇನು ಮಾಡಬಾರದು.. ಇಲ್ಲಿದೆ ಮಾಹಿತಿ:
1) ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
2) ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
3)ಯಾವುದೇ ರೀತಿಯ ವಿಜಯೋತ್ಸವದ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ/ರಾಜಕೀಯ ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
4) ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.
5) ವ್ಯಕ್ತಿಗಳು ಅಥವಾ ಶವಗಳ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ,
6) ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆ ಭಾದೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯ/ದೇಶದ ಭದ್ರತೆ ಯನ್ನು ಕುಗ್ಗಿಸು (ಕಡೆಗಣಿಸಿ)ಬಹುದಾದ ಅಥವಾ
ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು
ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭರಿತ ಭಾಷಣ ಮಾಡುವುದು. ಇಂಗಿತ ಸೂಚನೆಗಳು ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದು, ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
7) ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪಟಾಕಿ ಸಿಡಿಸುವುದು, ಸಭೆ ಸಮಾರಂಭಗಳನ್ನು ನಡೆಸುವುದು ನಿಷೇಧಿಸಿದೆ.
8) ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪಟಾಕಿ ಮಾರಾಟ ಮಾಡುವ ಪರವಾನಗಿದಾರರು ಅಂಗಡಿಗಳನ್ನು ಮುಚ್ಚುವುದು ಮತ್ತು ಪಟಾಕಿ ಮಾಡುವುದನ್ನು ನಿಷೇಧಿಸಿದೆ.
ಈ ಮೇಲಿನ ನಿರ್ಬಂಧಕಾಜ್ಞೆಯು ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಹಾಗೂ ಧಾರ್ಮಿಕ ಹಬ್ಬ ಹರಿದಿನಗಳು ಗೆ ಮತ್ತು ಶವಸಂಸ್ಕಾರ ಮೆರವಣಿಗೆ ಅನ್ವಯಿಸದಂತೆ ಆದೇಶಿಸಿದೆ.

euttarakannada.in

Categories: ಜಿಲ್ಲಾ ಸುದ್ದಿ

Leave A Reply

Your email address will not be published.