ಪಠ್ಯಕ್ರಮದ ಹೊರತಾಗಿಯೂ ಶಿಕ್ಷಕರು ವ್ಯಕ್ತಿತ್ವ ರೂಪಿಸಿಕೊಳ್ಳಲಿ; ಸ್ಪೀಕರ್ ಕಾಗೇರಿ

ಶಿರಸಿ: ಪಠ್ಯಕ್ರಮದ ವಿಷಯ ಮೀರಿ ಶಿಕ್ಷಕರು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಅಧ್ಯಯನ ಶೀಲರಾಗುವ ಮೂಲಕ ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕನನ್ನಾಗಿ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ಲಯನ್ಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಜೀವನ ದರ್ಶನ ನೀಡಬೇಕು. ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸಿಕೊಳ್ಳುವ ಜತೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕೆ ನೀಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ,  ಇಂದು ಶಿಕ್ಷಕರ ನೇಮಕಾತಿ ಸಮರ್ಪಕವಾಗಿ ನಡೆಯುತ್ತಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಿ 3-4 ತಿಂಗಳು ವಿಳಂಬ ಮಾಡಿ ಅತಿಥಿ ಶಿಕ್ಷಕರ ನೇಮಿಸಲಾಗುತ್ತಿದೆ. ಈ ರೀತಿಯಾದರೆ ಶಿಕ್ಷಣದಲ್ಲಿ ಗುಣಮಟ್ಟ ಹೇಗೆ ಬರಬೇಕು? ಎಂದು ಪ್ರಶ್ನಿಸಿದರು. ಅಧಿಕಾರಿಗಳಿಂದ ಶಿಕ್ಷಕರ ಮೇಲಿನ ಕಿರುಕುಳ ತಪ್ಪಬೇಕು, ತರಗತಿಯಲ್ಲಿ ನೆಮ್ಮದಿಯಾಗಿ ಪಾಠ ಮಾಡುವ ವಾತಾವರಣ ನಿರ್ಮಿಸಬೇಕು ಎಂದರು.

ಶಿರಸಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ದಿವಾಕರ ಶೆಟ್ಟಿ, ಡಯಟ್ ಪ್ರಾಚಾರ್ಯ ಬಿ.ವಿ.ನಾಯ್ಕ ಇತರರು ಇದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.