ರಾಮಜನ್ಮಭೂಮಿಯ ಐತಿಹಾಸಿಕ ತೀರ್ಪು ಸ್ವಾಗತಾರ್ಹ; ಶಾಸಕ ದಿನಕರ ಶೆಟ್ಟಿ

ಕುಮಟಾ: ಅಯೋಧ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತ ಬಹುಸಂಖ್ಯಾತ ಹಿಂದೂಗಳ ರಾಷ್ಟ್ರವಾಗಿದ್ದು, ಅಪಾರ ಪ್ರಮಾಣದಲ್ಲಿ ಶ್ರೀ ರಾಮನ ಭಕ್ತರಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಿವಾದದಲ್ಲಿರುವ ಅಯೋಧ್ಯಾ ರಾಮಮಂದಿರ ಪ್ರಕರಣ ಈಗ ಅಂತ್ಯಕಂಡಿದ್ದು, ಸವೋಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ನವೆಲ್ಲರೂ ಸ್ವಾಗತಿಸುತ್ತೇವೆ. ಸರ್ವೋಚ್ಛ ನ್ಯಾಯಾಲಯವು ಇಬ್ಬರಿಗೂ ಸಮನಾದ ನ್ಯಾಯವನ್ನು ನೀಡಿದ್ದು, ಮುಸ್ಲಿಂ ಸಮುದಾಯದವರಿಗೂ 5 ಎಕರೆ ಜಾಗವನ್ನು ನಿಗದಿಗೊಳಿಸಿರುವುದು ಸಂತೋಷದ ಸಂಗತಿ ಎಂದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.