ನ.12 ಕ್ಕೆ ಶಿರಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಶಿರಸಿ: ಉಪಚುನಾವಣೆಯ ತಯಾರಿಯಲ್ಲಿ ಮುಂಚೂಣಿಯಲ್ಲಿರುವ ಕಾಂಗ್ರೆಸ್, ಪಕ್ಷ ಸಂಘಟನೆ ದೃಷ್ಟಿಯಿಂದ ಶಿರಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯನ್ನು ಹಾಗು ಕಾರ್ಯಕರ್ತರ, ಪದಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನ. 12 ಮಂಗಳವಾರದಂದು ಏರ್ಪಡಿಸಿದೆ.

ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಭೀಮಣ್ಣ ನಾಯ್ಕ್ ಉಪಸ್ಥಿತರಿರುವರು. ಬಿಸಿಸಿ ಪದಾಧಿಕಾರಿಗಳು, ಸದಸ್ಯರು,ಬ್ಲಾಕ್ ವ್ಯಾಪ್ತಿಯ ಜಿಲ್ಲಾ ಸಮಿತಿ ಸದಸ್ಯರು,ಹಿರಿಯ ಮುಖಂಡರು, ಘಟಕ, ವಾರ್ಡ್, ಬೂತ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ವ್ಯಾಪ್ತಿಯ ವಿವಿಧ ವಿಭಾಗಗಳ ಜಿಲ್ಲಾ, ಬ್ಲಾಕ್ ಪದಾಧಿಕಾರಿಗಳು, ಜಿಲ್ಲಾಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತ ದ ಸದಸ್ಯರು, ನಗರಸಭೆಯ ಸದಸ್ಯರು ತಪ್ಪದೇ ಸಭೆಯಲ್ಲಿ ಪಾಲ್ಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೀಶ ಎನ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.