ಸಭಾಧ್ಯಕ್ಷರಿಂದ ರೇಲ್ವೆ ಸಚಿವ ಸುರೇಶ್ ಅಂಗಡಿಗೆ ಪತ್ರ.! ಏನಿದೆ ನೋಡಿ..

ಶಿರಸಿ: ಜನತೆಯ ಬೇಡಿಕೆಯೊಂದಿಗೆ ಬಹು ಪ್ರಯೋಜನಕಾರಿಯಾದ ತಾಳಗುಪ್ಪಾದಿಂದ ಸಿದ್ದಾಪುರ, ಶಿರಸಿ, ತಡಸ ಮುಂಡಗೋಡ ಮಾರ್ಗವಾಗಿ ಹುಬ್ಬಳ್ಳಿಗೆ ರೈಲು ಸಂಪರ್ಕ ಕಲ್ಪಿಸಬೇಕು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರೈಲ್ವೇ ಸಚಿವ ಸುರೇಶ್ ಅಂಗಡಿಯವರಿಗೆ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಮಾರ್ಗವು ಉತ್ತರ ಕನ್ನಡ ಜಿಲ್ಲೆಯಿಂದ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಕ್ಕೆ ಕಡಿಮೆ ದೂರದಲ್ಲಿ ಸಂಪರ್ಕ ಬೆಸೆಯಬಹುದಾಗಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕದ ವಿವಿಧ ಸ್ಥಳಗಳಿಗೆ ಸುಲಭವಾಗಿ ಸಂಪರ್ಕ ಕಲ್ಪಿಸಬಹುದಾಗಿದೆ. ಇದರಿಂದ ರಾಜ್ಯಕ್ಕೆ ಹೊಸ ರೈಲು ಸಂಪರ್ಕ ಕಲ್ಪಿತವಾಗುವುದರ ಜೊತೆಗೆ ಜಿಲ್ಲೆಯ ಹಾಗೂ ರಾಜ್ಯದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ದೊರಕುತ್ತದೆ.

ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಈ ಯೋಜನೆಯಿಂದ ಹೆಚ್ಚಿನ ಅನುಕೂಲವಾಗುವುದನ್ನು ಪರಿಗಣಿಸಿ ಸದರಿ ರೈಲು ಮಾರ್ಗವನ್ನು ಮಂಜೂರಿಗೊಳಿಸಬೇಕು ಎಂದು ರೈಲ್ವೇ ಸಚಿವರಿಗೆ ಮನವಿ ನೀಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರಯತ್ನಿಸಬೇಕೆಂದು ಮನವಿ ಸಲ್ಲಿಸಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತಸಹಾಯಕ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.