ಅಪ್ಪ ಬಿಜೆಪಿ- ಮಗ ಕಾಂಗ್ರೆಸ್ ಸೇರುವುದಾಗಿ ಘೋಷಣೆ.!!

ಮುಂಡಗೋಡ: ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಅವರ ಪುತ್ರ ಬಾಪುಗೌಡ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಮಂಗಳವಾರ ಘೋಷಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನ. 22 ರಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸಮ್ಮುಖದಲ್ಲಿ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದರು. ಕಾಂಗ್ರೆಸ್ ಪಕ್ಷಕ್ಕೆ ತಾನು ಸೇರ್ಪಡೆಯಾಗುವುದರಿಂದ ತನ್ನ ತಂದೆಗೆ ಮುಜುಗರ ಆಗುವುದಿಲ್ಲ. ಏಕೆಂದರೆ ಬಿಜೆಪಿಯಿಂದ ವಿ.ಎಸ್.ಪಾಟೀಲ ಸ್ಪರ್ಧಿಸಿಲ್ಲ. ಅವರೂ ಅಭ್ಯರ್ಥಿಯೂ ಅಲ್ಲ. ತನ್ನ ನಿರ್ಧಾ ವೈಯಕ್ತಿಕವಾದದು ಎಂದರು.

ಇಷ್ಟು ದಿನ ತಾನು ಯಾವುದೇ ಪಕ್ಷದ ಸದಸ್ಯತ್ವ ಪಡೆದಿಲ್ಲ. ಇಲ್ಲಿಯವರೆಗೆ ಎಲ್ಲ ವರ್ಗದ ಜನರೊಂದಿಗೆ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿದ್ದೇನೆ. ಬಿಜೆಪಿಯು ಸಹ ಯಾವುದೇ ಹುದ್ದೆಯನ್ನು ತನಗೆ ನೀಡಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ಯುವ ಮುಖಂಡ ಬಾಪುಗೌಡ ಅವರನ್ನು ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರಿಗೆ ಹೈಕಮಾಂಡ್ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ ಪಕ್ಷಕ್ಕೆ ಬಂದಿದ್ದಕ್ಕೆ ಸ್ವಾಗತಿಸುತ್ತೇವೆ. ಅವರಿಂದ ಕಾಂಗ್ರೆಸ್ ಪಕ್ಷಕ್ಕೆದೊಡ್ಡ ಶಕ್ತಿ ಬಂದಂತಾಗಿದೆ ಎಂದರು.

ಮುಖಂಡರಾದ ಎಚ್.ಎಂ.ನಾಯ್ಕ, ಪಿ.ಜಿ.ತಂಗಚ್ಚನ್, ಧರ್ಮರಾಜ ನಡಗೇರಿ, ರಾಜು ಭೋವಿ, ಪ.ಪಂ.ಸದಸ್ಯರಾದ ವಿಶ್ವನಾಥ ಪವಾಡಶೆಟ್ಟರ್, ಮಹ್ಮದಜಾಫರ ಹಂಡಿ, ಮಹ್ಮದಗೌಸ್ ಮಕಾನದಾರ, ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.