ಭಗವದ್ಗೀತಾ ಸ್ಪರ್ಧೆ: ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಕುಮಟಾ: ಹನುಮಂತ ಬೆಣ್ಣೆ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ ನೆಲ್ಲಿಕೇರಿಯಲ್ಲಿ ನಡೆದ ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳಲ್ಲಿ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಾಲೆಯ ಸಂಸ್ಕೃತ ಶಿಕ್ಷಕಿ ಗೀತಾ ಮೂಳೆಯವರ ಮಾರ್ಗದರ್ಶನದಲ್ಲಿ ಭಾಗವಹಿಸಿ ಉತ್ತಮ ಸಾಧನೆಗೈದಿದ್ದಾರೆ.

ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ನಮೃತಾ ಶಾನಭಾಗ ಪ್ರಥಮ, ನಂದನ ಕಾಮತ ದ್ವಿತೀಯ ಸ್ಥಾನ ಪಡೆದರೆ, ಭಾಷಣದಲ್ಲಿ ಅಕ್ಷತಾ ಭಟ್ಟ ಪ್ರಥಮ, ಚಂದನ ಹೆಗಡೆ ದ್ವಿತೀಯ, ಅಂತೆಯೇ ರಸಪ್ರಶ್ನೆಯಲ್ಲಿ ಮನು ಹಿರೇಗಂಗೆ ಹಾಗೂ ಕಾರ್ತಿಕ ಪಿ. ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.