ಪ್ರತಿಭಾ ಕಾರಂಜಿ: ಸಿವಿಎಸ್‍ಕೆ ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಮಟಾ: ಹೊನ್ನಾವರದ ಹೋಲಿ ರೋಸರಿ ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಟ್ಟಣದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಭಾವಗೀತೆ ಸ್ಪರ್ಧೆಯಲ್ಲಿ ಶಿಲ್ಪಾ ಭಟ್ಟ, ಆಶುಭಾಷಣದಲ್ಲಿ ಕಾರ್ತಿಕ ನಾಯ್ಕ, ಕೊಂಕಣಿ ಭಾಷಣದಲ್ಲಿ ನಮಿತಾ ಭಟ್, ರಂಗೋಲಿಯಲ್ಲಿ ಖುಷಿ ಭಂಡಾರಿ ಪ್ರಥಮ ಸ್ಥಾನಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜನಪದಗೀತೆಯಲ್ಲಿ ಅಭೇದಾ ಭಟ್ಟ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

 

Categories: ಜಿಲ್ಲಾ ಸುದ್ದಿ

Leave A Reply

Your email address will not be published.