ಸ್ಥಳದಲ್ಲಿ ಪಾಠೋಪಕರಣ ಸ್ಪರ್ಧೆ: ಶಿಕ್ಷಕ ಮಹಾದೇವ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಮಟಾ: ಅಂಕೋಲಾ ತಾಲೂಕಿನ ಪಿ.ಎಂ ಪ್ರೌಢಶಾಲೆಯಲ್ಲಿ ಜಿ.ಪಂ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಅಡಿಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಸ್ಥಳದಲ್ಲಿ ಪಾಠೋಪಕರಣ ಎಂಬ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಸಾಧನೆಗೆ ಮಹಾತ್ಮ ಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಮುಖ್ಯಾಧ್ಯಾಪಕ ರೋಹಿದಾಸ ಗಾಂವಕರ, ಆಶ್ರಯ ಫೌಂಡೇಶನ್ ಅಧ್ಯಕ್ಷ ರಾಜೀವ ಗಾಂವಕರ, ಗ್ರಾ.ಪಂ ಅಧ್ಯಕ್ಷ ಸಣ್ಣಪ್ಪ ನಾಯಕ, ವ್ಯ.ಸೇ.ಸ ಸಂಘದ ಅಧ್ಯಕ್ಷ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷ ರಾಜು ಗಾಂವಕರ, ಸ್ಪಂದನ ಫೌಂಡೇಶನ್‍ನ ಎನ್. ರಾಮು ಹೀರೆಗುತ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.