ಗೋಕರ್ಣಕ್ಕೆ ವಿಶ್ವಸಂತೋಷ ಭಾರತೀ ಶ್ರೀಗಳು ಭೇಟಿ


ಗೋಕರ್ಣ: ವಿಶ್ವಸಂತೋಷ ಭಾರತೀ ಸ್ವಾಮೀಜಿಗಳವರು, ಬಾರಕೂರು ಸಂಸ್ಥಾನಮಠ ಇವರು ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿ ಅಭಿಷೇಕ, ಪೂಜೆ ನೆರವೇರಿಸಿದರು. ಪೂಜೆಯ ನಂತರ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ನಾಗರಾಜ ನಾಯಕ ತೊರ್ಕೆ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಜಿ.ಕೆ ಹೆಗಡೆ ಫಲ ಸಮರ್ಪಿಸಿದರು. ವೇ. ಲಂಬೋಧರ ಚಿಟ್ಟೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.