ವಿಜ್ಞಾನ ಸಮಾವೇಶ: ಹಿರೇಗುತ್ತಿ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ


ಕುಮಟಾ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರದಲ್ಲಿ ನಡೆದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ತಾಲೂಕಿನ ಹಿರೇಗುತ್ತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪರಿಸರ ಸ್ನೇಹಿ ಒಲೆ ಎಂಬ ವೈಜ್ಞಾನಿಕ ಮಾದರಿ ತಯಾರಿಸಿ, ಇತರೆ ಇಂಧನ ಒಲೆಗಳಿಂದ ಪರಿಸರದ ಮೇಲೆ ಉಂಟಾಗುವ ಹಾನಿಯನ್ನು ತಪ್ಪಿಸಬಹುದಾದ ಕುರಿತು ವಿದ್ಯಾರ್ಥಿಗಳಾದ ಸನಿದ ಮಂಜುನಾಥ ನಾಯಕ ಹಾಗೂ ರಾಘವೇಂದ್ರ ಗೌಡ ಪ್ರಬಂಧ ಮಂಡಿಸಿದ್ದರು. ತಂಬಾಕು ಸೇವನೆ ಮರಣದ ಹಾದಿ ಎಂಬ ವೈಜ್ಞಾನಿಕ ಪ್ರಬಂಧವನ್ನು ವಿದ್ಯಾರ್ಥಿಗಳಾದ ನಚಿತ ಅಂಬಿಗ ಹಾಗೂ ಪ್ರೀತಮ್ ಗಾಂವಕರ ಮಂಡಿಸಿ, ಮಂಡ್ಯದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಮಾರ್ಗದರ್ಶನ ನೀಡಿದ್ದರು. ಈ ಸಾಧನೆಗೆ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಮುಖ್ಯೋಧ್ಯಾಪಕ ರೋಹಿದಾಸ ಗಾಂವಕರ, ವಿಶ್ವನಾಥ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ, ನಾಗರಾಜ ನಾಯಕ, ಜಾನಕಿ ಗೊಂಡ, ಮಹಾದೇವ ಗೌಡ, ಇಂದಿರಾ ನಾಯಕ, ಶಿಲ್ಪಾ ನಾಯಕ, ಕವಿತಾ ಅಂಬಿಗ, ಆಶ್ರಯ ಫೌಂಡೇಶನ್ ಅಧ್ಯಕ್ಷ ರಾಜೀವ ಗಾಂವಕರ, ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪ ಮಾರುತಿ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನೀಲಕಂಠ ನಾಯಕ, ಸ್ಪಂದನ ಫೌಂಡೇಶನ್‍ನ ಎನ್. ರಾಮು ಹೀರೆಗುತ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.