ಆನಂದಾಶ್ರಮ ಪ್ರೌಢಶಾಲೆಯಲ್ಲಿ ಮತದಾನ ಜಾಗೃತಿ ಜಾಥಾ


ಗೋಕರ್ಣ: ಬಂಕಿಕೊಡ್ಲದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಮತದಾರ ನೊಂದಣಿ ಜಾಗೃತಿ ಜಾಥವನ್ನು ನಡೆಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ಮಾಡಿ, 18 ವರ್ಷ ತುಂಬಿದ ಎಲ್ಲಾ ಪ್ರಜೆಗಳು ಮತದಾರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸುವಂತೆ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಯಿತು. ಮುಖ್ಯಾಧ್ಯಾಪಕ ಗಂಗಾಧರ ಭಟ್, ಜಾಥಾ ಸಂಚಾಲಕ ಶಿಕ್ಷಕರಾದ ಗಿರೀಶ ಆರ್. ಹೆಬ್ಬಾರ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.