ಕ್ಷೇತ್ರ ಅಭಿವೃದ್ಧಿಗೆ ಸಚಿವ ಕಾರಜೋಳರ ಜೊತೆ ಚರ್ಚಿಸಿದ ಶಾಸಕ ದಿನಕರ ಶೆಟ್ಟಿ

ಕುಮಟಾ: ಉಡುಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವ ಗೋವಿಂದ ಕಾರಜೋಳ ಅವರನ್ನು ಶಾಸಕ ದಿನಕರ ಶೆಟ್ಟಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ, ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಗಜಾನನ ಪೈ, ಪಕ್ಷದ ಹಿರಿಯ ಮುಖಂಡ ವಿನೋದ ಪ್ರಭು, ಪುರಸಭಾ ಸದಸ್ಯ ಸಂತೋಷ ನಾಯ್ಕ, ಸಂತೇಗುಳಿ ಗ್ರಾ.ಪಂ ಸದಸ್ಯ ವಿನಾಯಕ ಭಟ್ಟ, ಪಕ್ಷದ ಪ್ರಮುಖರಾದ ಜಿ.ಎಸ್.ಗುನಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.