Slide
Slide
Slide
previous arrow
next arrow

ಕಾರವಾರ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕಿ ರೂಪಾಲಿ

ಕಾರವಾರ: ಇಲ್ಲಿನ ಮಹಾಸತಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಕ್ಷದ ಕಾರವಾರ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಪಾಲ್ಗೊಂಡಿದ್ದರು.
ಕಾರ್ಯಕಾರಣಿ ಸಭೆ ಅತಿ ಮಹತ್ವದಾಗಿದ್ದು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳುವುದು ಅವಶ್ಯಕ. ಕೋವಿಡ್-19ರ ಸಂದರ್ಭದಲ್ಲಿ ವರ್ಚುವಲ್ ಮೂಲಕ ಸಭೆಗಳನ್ನು ನಡೆಸಿ ಕೋವಿಡ್ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಸಹಕಾರವನ್ನು ನೀಡಿರುವುದು ಶ್ಲಾಘನೀಯ. ಪದಾಧಿಕಾರಿಗಳು ಕೊರೊನಾ ಕಾಲದಲ್ಲಿ ಸಾಧ್ಯವಾದಷ್ಟು ನೆರವು ನೀಡಿ, ಈ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷ ಸಂಘಟನೆಯ ಕಾರ್ಯವನ್ನು ನಿರಂತರವಾಗಿ ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ನಗರ ಮಂಡಲದ ಅಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಪಾಧ್ಯಕ್ಷರು, ವಿವಿಧ ಮೋರ್ಚಾದ ಜಿಲ್ಲಾಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ನಗರಸಭೆ ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
Back to top