Slide
Slide
Slide
previous arrow
next arrow

ಸಂಭ್ರಮಾಚರಣೆಗೆ ಬ್ರೇಕ್; ಕರಾವಳಿಯಲ್ಲಿ ರಾತ್ರಿ 8 ರಿಂದ ನಿಷೇಧಾಜ್ಞೆ ಜಾರಿ

ಕಾರವಾರ: ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಕೋವಿಡ್-19 ರೂಪಾಂತರಿ ಒಮಿಕ್ರಾನ್ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಡಿ.31 ರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. 
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರವಾಸಿಗರು ಸಮುದ್ರ ತೀರದಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ ಸೇರಿ ಆಚರಿಸುತ್ತಾರೆ. ಕೋವಿಡ್-19 ರೂಪಾಂತರಿ  ವೈರಸ್ ಹರಡದಂತೆ ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಿರುವುದರಿಂದ ಜಿಲ್ಲೆಯಲ್ಲಿ ಕರಾವಳಿ ಪ್ರದೇಶವಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳಲ್ಲಿಯ ಸಮುದ್ರತೀರದಲ್ಲಿ ಹಾಗೂ ಉದ್ಯಾನವನಗಳಲ್ಲಿ ಡಿ.31 ರ ರಾತ್ರಿ ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ನಿರ್ಬಂಧಿಸುವ ಕುರಿತು ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This
Back to top