ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಗ್ರಾಮ ಪಂಚಾಯತಿ ತಿಳಿಸಿದೆ.
ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.