ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗಿ ಗ್ರಾಮದ ಯುವತಿಯೊಬ್ಬಳು ಮನೆಯ ಹಿತ್ತಲಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
18 ವರ್ಷದ ಯವತಿ ಕಾಣೆಯಾದವಳಾಗಿದ್ದಾಳೆ. ಇವಳು ಜ.17ರಂದು ಸಂಜೆ 7ಗಂಟೆಯ ಸಮಯಕ್ಕೆ ಮನೆಯ ಹಿತ್ತಲಲ್ಲಿ ಪಾತ್ರೆಗಳನ್ನು ತೊಳೆಯುತ್ತಿದ್ದವಳು ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಎಲ್ಲಿಯೊ ಹೋಗಿ ಕಾಣೆಯಾಗಿದ್ದಾಳೆ. ಕಳೆದ ಮೂರು ದಿನಗಳಿಂದ ಸಂಬಂಧಿಕರ ಮನೆಗಳು ಹಾಗೂ ಅಕ್ಕ-ಪಕ್ಕದ ಗ್ರಾಮಗಳಲ್ಲಿ ವಿಚಾರಿಸಿದರೂ ಸಹ ಎಲ್ಲಿಯೂ ಪತ್ತೆಯಾಗಿಲ್ಲ. ಕಾಣೆಯಾದವಳ ತಂದೆ ಮಗಳನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.