ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಜೂನ್ 20 ಮತ್ತು 21 ರಂದು ತಮ್ಮ ನಿಗದಿತ ರಾಜ್ಯ ಪ್ರವಾಸದ ಕುರಿತು ಚರ್ಚಿಸಿದ್ದಾರೆ.
ಸಭೆಯ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರಧಾನ ಮಂತ್ರಿ ಅವರ ಕರ್ನಾಟಕ ಭೇಟಿ ವೇಳೆ ಅವರು ಉದ್ಘಾಟಿಸಲು ಉದ್ದೇಶಿಸಿರುವ ಕಾರ್ಯಕ್ರಮಗಳ ವಿವರಗಳನ್ನು ನೀಡಿದ್ದಾರೆ
ವಿಡಿಯೋ ಕಾನ್ಫರೆನ್ಸ್ ಬಳಿಕ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ಜೂನ್ 21 ರಂದು ಮೈಸೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಬೃಹತ್ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಪೆ- news13.in