ಕಾರವಾರ: ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 22 ದಿವ್ಯಾಂಗ ಫಲಾನುಭವಿಗಳಿಗೆ ಇಂದು ತ್ರಿಚಕ್ರ ವಾಹನಗಳನ್ನು ಶಾಸಕಿ ರೂಪಾಲಿ ನಾಯ್ಕ ವಿತರಿಸಿದರು. ದಿವ್ಯಾಂಗ ಫಲಾನುಭವಿಗಳ ಏಳಿಗೆಗಾಗಿ ಸರ್ಕಾರ ಅನೇಕ ಯೋಜನೆ ಮತ್ತು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಹಲವರಿಗೆ ಯೋಜನೆಗಳು ತಲುಪುತ್ತಿರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಶ್ರಮಿಸುತ್ತಿದ್ದಾರೆ. ಹಿಂದೆ ವಿಶೇಷ ಚೇತನರು ಚುನಾವಣೆ ವೇಳೆ ಮಾತ್ರ ನೆನಪಾಗುತ್ತಿದ್ದರು. ಇದೇ ಮೊದಲ ಬಾರಿಗೆ ಕಾರವಾರ ಅಂಕೋಲಾ ಕ್ಷೇತ್ರದ ಒಟ್ಟು 22 ಜನರಿಗೆ ವಾಹನ ವಿತರಿಸಲಾಗುತ್ತಿದೆ. ಎರಡನೇ ಹಂತದಲ್ಲೂ ವಾಹನ ವಿತರಣೆ ಮಾಡಲಾಗುತ್ತದೆ.
ವಿಶೇಷ ಚೇತನರಿಗೆ ಒಳಗಾದವರಿಗೆ ಏನೇ ಕೊಟ್ಟರೂ ಕಡಿಮೆ, ತಮ್ಮಿಂದ ಏನೂ ಸಾಧ್ಯವಾಗುವುದಿಲ್ಲ ಎಂಬ ಮಾನಸಿಕ ಸ್ಥಿತಿಯಲ್ಲಿ ಅವರಿರುತ್ತಾರೆ. ಹೀಗಾಗಿ ಅವರನ್ನು ನಾವು ಹುರಿದುಂಬಿಸಿ, ಆತ್ಮವಿಶ್ವಾಸ ಮೂಡಿಸುವ ಕೆಲಸವಾಗಬೇಕು ಎಂದು ಅವರು ಈ ವೇಳೆ ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷರು, ಬಿಜೆಪಿ ನಗರ ಮಂಡಲ ಅಧ್ಯಕ್ಷರು, ಗ್ರಾಮೀಣ ಮಂಡಲ ಅಧ್ಯಕ್ಷರು, ತಹಶೀಲ್ದಾರ್, ಪೌರಾಯುಕ್ತರು, ತಾ. ಪಂ ಆಡಳಿತಾಧಿಕಾರಿ, ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತದ್ದರು.