ಸಿದ್ದಾಪುರ: ತಾಲೂಕಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಶಿನ್ ಸ್ಥಗಿತಗೊಂಡು, ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಕುರಿತು ಸಾರ್ವಜನಿಕರು ಹಾಗೂ ರಕ್ಷಾ ಸಮಿತಿಯವರು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ, ಶಿರಸಿಯಿಂದ ಒಂದು ಡಯಾಲಿಸಿಸ್ ಯಂತ್ರವನ್ನು ಸಿದ್ದಾಪುರ ಆಸ್ಪತ್ರೆಗೆ ಕಳುಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ತಾಲೂಕಾ ಆಸ್ಪತ್ರೆಯಲ್ಲಿ ಹಾಲಿ ಎರಡು ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿ, ಸಭಾಧ್ಯಕ್ಷರಿಗೆ ಹೃತ್ಪೂರ್ವಕ ಅಭಿನಂಧನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ತಾಲುಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.