ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 20ರಂದು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಕ್ರೀಡಾಪಟುಗಳ ಜೊತೆ ಸಂವಾದ ನಡೆಸಲಿದ್ದಾರೆ.
ಕಾಮನ್ವೆಲ್ತ್ ಕ್ರೀಡಾಕೂಟವು ಬರ್ಮಿಂಗ್ ಹ್ಯಾಮ್ ನಲ್ಲಿ ಜುಲೈ 28ರಂದು ಆರಂಭವಾಗಲಿದ್ದು ಆಗಸ್ಟ್ 8ರಂದು ಮುಕ್ತಾಯವಾಗಲಿದೆ. ಇದರಲ್ಲಿ ಭಾರತದ 215 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರೊಂದಿಗೆ 107 ಅಧಿಕಾರಿಗಳು, ಸಹಾಯಕ ಸಿಬ್ಬಂದಿಗಳು ಕೂಡ ತೆರಳುತ್ತಿದ್ದಾರೆ.
ಮೋದಿ ನಾಳೆ ಈ ಕ್ರೀಡಾಪಟುಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು ಈ ಮೂಲಕ ಅವರಿಗೆ ಆತ್ಮವಿಶ್ವಾಸವನ್ನು ತುಂಬಲಿದ್ದಾರೆ.
2018ರಲ್ಲಿ ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತವು 66 ಪದಕಗಳನ್ನು ಗೆದ್ದುಕೊಂಡು ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿತ್ತು.
ಕೃಪೆ-https://news13.in/