ಶಿರಸಿ: ಕಸ್ತೂರಿ ರಂಗನ್ ವರದಿಯ 5ನೇ ಕರಡು ಅಧಿಸೂಚನೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಚಿಂತನ ಸಭೆಯನ್ನು ಜು.23, ಮುಂಜಾನೆ 10 ಗಂಟೆಗೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಕಾರ್ಯಾಲಯದಲ್ಲಿ ಕರೆಯಲಾಗಿದೆ ಎಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಸೂಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ವಿವಿಧ ತಾಲೂಕಿನ 704 ಹಳ್ಳಿಗಳನ್ನ ಸೇರ್ಪಡಿಸಿಕೊಂಡು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಈ ಕ್ಷೇತ್ರದಲ್ಲಿ ವಾಸ್ತವ್ಯ ಮತ್ತು ಸಾಗುವಳಿಗಾಗಿ ಗ್ರಾಮಸ್ಥರ ಮತ್ತು ಅರಣ್ಯವಾಸಿಗಳ ಜೀವನ ವ್ಯವಸ್ಥೆ ಮೇಲೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವ ಹಿನ್ನೆಲೆಯಲ್ಲಿ ಹೋರಾಟಗಾರರ ವೇದಿಕೆಯ ನಿರ್ಧಾರವನ್ನ ನಿರ್ಧರಿಸುವ ಚಿಂತನ ಸಭೆಗೆ ಆಸಕ್ತರು ಆಗಮಿಸಬೇಕೆಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.