Slide
Slide
Slide
previous arrow
next arrow

ಆ.7ಕ್ಕೆ ಅಭಿನಯ ಮತ್ತು ರಂಗ ತರಬೇತಿ ಪ್ರವೇಶ ಪ್ರಕ್ರಿಯೆ

300x250 AD

ಶಿರಸಿ: ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2022-23 ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಆಗಸ್ಟ್ 07 ರಂದು ಮೈಸೂರಿನಲ್ಲಿ ನಡೆಸಲಿದೆ.

ಹಿರಿಯ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ. 

ತನ್ನ ಚಟುವಟಿಕೆಯ ಭಾಗವಾಗಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಮಾನ್ಯತೆಯಡಿಯಲ್ಲಿ 16 ರಿಂದ 30 ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದೆ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ ಅಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ.

300x250 AD

ಪ್ರತಿದಿನ ಸಂಜೆ 5.30 ರಿಂದ 9 ರ ವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ. ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು 500 ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದೇ ಸಂದರ್ಶನದಲ್ಲಿ ಭಾಗವಹಿಸಬೇಕಾಗಿದೆ. ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್( www.natanamysuru.org) ಅಥವಾ ಕಛೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಆ.ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸಬೇಕು. ಆಡಿಷನ್ ಮತ್ತು ಪ್ರವೇಶಾತಿ ಕುರಿತ ಸೂಚನೆಗಳು, ಹೆಚ್ಚಿನ ಮಾಹಿತಿಗಳು ವೆಬ್‌ಸೈಟ್ ಅಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ 7259537777, 9480468327, 9945555570, 9845595505 ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This
300x250 AD
300x250 AD
300x250 AD
Back to top