ಶಿರಸಿ :ಪಠ್ಯ ಪುಸ್ತಕ ಶಿಕ್ಷಣದ ಜತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರಿಂದ ಸುಸಂಸ್ಕೃತ ಬದುಕನ್ನು ಭವಿಷ್ಯದಲ್ಲಿ ವಿದ್ಯಾರ್ಥಿಗಳು ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು
ಅವರು ನಗರದ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯ 100 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ ಉಚಿತ ಪಠ್ಯ ಪುಸ್ತಕ ಕ್ರೀಡಾ ಸಾಮಗ್ರಿ ವಿತರಿಸಿ ಮಾತನಾಡಿದರು ಬೆಳೆಯುವ ಸಿರಿ-ಮೊಳಕೆಯಲ್ಲಿ ನೋಡು ಎಂಬಂತೆ ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡ ಗುಣಗಳು ಬದುಕಿನ ದಿಕ್ಸೂಚಿಗಳಾಗಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ವಿದ್ಯೆಯನ್ನು ಕಲಿತುಕೊಳ್ಳುವ ಜತೆ-ಜತೆಯಲ್ಲಿ ಗುರು ಹಿರಿಯರನ್ನು ಗೌರವಿಸುವ ದೇಶಾಭಿಮಾನ ಬೆಳೆಸಿಕೊಳ್ಳುವ ಸದ್ಗುಣವನ್ನು ಮೈಗೂಡಿಸಿಕೊಂಡಿದ್ದೆ ಆದರೆ ಭವಿಷ್ಯದ ಬದುಕು ಉಜ್ವಲವಾಗಿರುತ್ತದೆ, ವಿದ್ಯಾರ್ಥಿಗಳು ವಿದ್ಯಾವಂತರಾಗುವ ಮೂಲಕ ತಮ್ಮ ಪೋಷಕರು ಹಾಗೂ ಶಾಲೆಗೆ ಕೀರ್ತಿ ತರುವಂತೆ ಆಶಿಸಿದರು. ತಮ್ಮ ಟ್ರಸ್ಟ್ 19 ವರ್ಷದಿಂದ ಯಾವುದೇ ದೇಣಿಗೆಯನ್ನು ಪಡೆಯದೆ ತಮ್ಮ ಸ್ವಂತ ಖರ್ಚಿನಲ್ಲಿ ನಿರಂತರವಾಗಿ ಹಲವಾರು ರೀತಿಯಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಪ್ರೋತ್ಸಾಹಿಸುತ್ತಿದೆ. ಶಿಕ್ಷಣಕ್ಕೆ ಪ್ರೋತ್ಸಾಹಿಸುವುದೆ ನಮ್ಮ ಮೂಲ ಉದ್ದೇಶ ಎಂದು ಹೇಳಿದರು
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಪ್ರೌಢಶಾಲೆಯ ಅಧ್ಯಕ್ಷ ರಮೇಶ್ ದುಬಾಸಿ, ಪ್ರಧಾನ ಕಾರ್ಯದರ್ಶಿ ಪರಮಾನಂದ ಹೆಗಡೆ, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು,