ಹೊನ್ನಾವರ ತಾಲೂಕಿನ ನವಿಲಗೋಣ ಪಂಚಾಯತಿಯಲ್ಲಿ ಗ್ರಾ.ಪಂ. ಅಧ್ಯಕ್ಷ ಸತೀಶ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯರು, ಸಿಬ್ಬಂದಿ ಇದ್ದರು.
ಹೊನ್ನಾವರ ಪಟ್ಟಣ ಪಂಚಾಯತಿ ಆವರಣದಲ್ಲಿ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಧ್ವಜಾರೋಹಣ ನೇರವೇರಿಸಿದರು. ಸದಸ್ಯರು, ಮುಖ್ಯಾಧಿಕಾರಿಗಳು, ಸಿಬ್ಬಂದಿ, ಪೌರಕಾರ್ಮಿಕರು ಹಾಜರಿದ್ದರು.
ಹೊನ್ನಾವರ ಟೆಂಪೊ ಯೂನಿಯನ್ ವತಿಯಿಂದ ಟೆಂಪೊ ಚಾಲಕ- ಮಾಲಕರ ಸಂಘದ ಅಧ್ಯಕ್ಷ ನಾಗರಾಜ ಯಾಜಿ ಧ್ವಜಾರೋಹಣ ನೇರವೇರಿಸಿದರು. ಟೆಂಪೋ ಚಾಲಕರು, ನಿರ್ವಾಹಕರು ಹಾಜರಿದ್ದರು.
ಹೊನ್ನಾವರ ಪೋಲಿಸ್ ವೃತ್ತ ನಿರೀಕ್ಷಕ ಶ್ರೀಧರ ಎಸ್.ಆರ್. ಅವರು ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಪಿಎಸೈ, ಸಿಬ್ಬಂದಿ ಇದ್ದರು.
ಬಿಜೆಪಿಯ ಕಾರವಾರ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ಶಾಸಕಿ ರೂಪಾಲಿ ನಾಯ್ಕ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ್ ಧ್ವಜಾರೋಹಣ ನೆರವೇರಿಸಿದರು. ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಮಹಾಶಕ್ತಿ ಹಾಗೂ ಶಕ್ತಿಕೇಂದ್ರದ ಪ್ರಭಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕರಬಂದಿ ಗ್ರಾಮ, ಅಂಕೋಲಾ ತಾಲೂಕಿನ ಸೂರ್ವೆಯಲ್ಲಿ ಸ್ವಾತಂತ್ರ್ಯ ವೀರರ ತ್ಯಾಗ ಬಲಿದಾನದ ಪ್ರತಿಫಲವಾಗಿ ನಿರ್ಮಿಸಿದ ಅಮರ ಯೋಧರ ಸ್ತೂಪದ ಸನ್ನಿಧಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜವಂದನೆ ಕಾರ್ಯಕ್ರಮ ನಡೆಯಿತು.