ಕಾರವಾರ: ನ್ಯಾಷನಲ್ ಸಫಾಯಿ ಕರ್ಮಚಾರಿ ಫೈನಾನ್ಸ್ ಆ್ಯಂಡ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ವತಿಯಿಂದ ಪೌರ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ ಗುರುವಾರ ನಗರಸಭೆ ಸಭಾಭವನದಲ್ಲಿ ನಡೆಯಿತು.
ಈ ಕಾರ್ಯಾಗಾರದಲ್ಲಿ ಪೌರ ಕಾರ್ಮಿಕರು ಸ್ವಚ್ಚತಾ ಕಾರ್ಯ ಕೈಗೊಳ್ಳುವ ಮೊದಲು ಯಾವ ಯಾವ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಸ್ಥಳೀಯ ಸಂಸ್ಥೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಸಲಕರಣೆಗಳನ್ನು ನೀಡುವ ಬಗ್ಗೆ, ಹೀಗೆ ಪೌರ ಕಾರ್ಮಿಕರಿಗೆ ಇರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮುಖ್ಯವಾಗಿ ಸ್ವಚ್ಚತಾ ಕಾರ್ಮಿಕರಿಗೆ ಮತ್ತು ಕಾರ್ಮಿಕರ ಕುಟುಂಬಗಳಿಗೆ ಕೇಂದ್ರ ಸರಕಾರದ ಏನೆಲ್ಲ ಸವಲತ್ತುಗಳಿಗೆ ಅವುಗಳ ಲಾಭ ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಸಿಗುವ ಶಿಕ್ಷಣ ಸಾಲ ಸೌಲಭ್ಯದ ಮಾಹಿತಿ ಜೊತೆಗೆ ಸ್ವಚ್ಚತಾ ಕಾರ್ಮಿಕರಿಗೆ ಇರುವ ಆರೋಗ್ಯ ಸೇವೆ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.
ನ್ಯಾಷನಲ್ ಸಫಾಯಿ ಕರ್ಮಚಾರಿ ಫೈನಾನ್ಸ್ ಆ್ಯಂಡ್ ಡೆವಲಪ್‌ಮೆಂಟ್ ಕಾರ್ಪೋರೇಷನ್ ವತಿಯಿಂದ ಡಾ. ಸಂಜಯ ಎಮ್ ನಾಯ್ಕ ಇವರು ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು. ನಗರಸಭೆಯ ಪೌರ ಕಾರ್ಮಿಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.