ಯಲ್ಲಾಪುರ: ಲಾರಿಯೊಂದು ಪಲ್ಟಿಯಾಗಿ, ಪಲ್ಟಿಯಾದ ಲಾರಿಗೆ ಕಾರು ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅರಬೈಲ್ ಘಟ್ಟದಲ್ಲಿ ಸೋಮವಾರ ನಡೆದಿದೆ.
ಆಂಧ್ರದಿಂದ ಟೈಲ್ಸ್ ತುಂಬಿಕೊಂಡು ಮಂಗಳೂರು ಕಡೆಗೆ ಹೊರಟ ಸಂದರ್ಭದಲ್ಲಿ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಆ ಲಾರಿಗೆ ಕಾರು ಗುದ್ದಿದೆ. ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಲಾರಿ ಜಖಂಗೊಂಡಿದ್ದು, ಟೈಲ್ಸ್ ಒಡೆದು ಹಾನಿಯಾಗಿದೆ.
ಲಾರಿ ಅಪಘಾತದಿಂದ ಹೆದ್ದಾರಿಯಲ್ಲಿ ಕೆಲವು ಸಮಯ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಪೊಲೀಸರು ಪ್ರಕರಣ ಪರಿಶೀಲಿಸಿದ್ದು,ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.