ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡುವ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
“ಪ್ರಧಾನಿ ಮೋದಿ ಅವರು ಬಹಳ ಸಮಯದ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗುವ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅವರು ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಯೋಜನೆಗಳು ಇಲ್ಲಿನ ಆರ್ಥಿಕ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತವೆ” ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ಕರ್ನಾಟಕದ ಮೀನುಗಾರ ಸಮುದಾಯಕ್ಕೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಪರಿಚಯಿಸಿದೆ ಎಂದು ಅವರು ಹೇಳಿದರು.
ಮುರುಘಾ ಮಠದ ಶ್ರೀಗಳ ಬಂಧನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲವೂ ಕಾನೂನು ವ್ಯಾಪ್ತಿಗೆ ಒಳಪಡುತ್ತದೆ, ಅತ್ಯಂತ ನ್ಯಾಯಯುತವಾಗಿ ತನಿಖೆ ನಡೆಯಲಿದೆ, ತನಿಖೆ ನಡೆಯುತ್ತಿರುವುದರಿಂದ ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.
ಕೃಪೆ:http://news13.in