ಸಿದ್ದಾಪುರ: ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುವ ಕೇಂದ್ರಗಳು ಶಾಲೆಯಾಗಬೇಕು. ಅದು ಎಲ್ಲರ ಪ್ರೇರಣೆಯ ಕೇಂದ್ರವಾಗುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಅಂಕವನ್ನು ಕೊಟ್ಟಿದೆ. ಅದು ಮುಂದೆ ಯಾವುದೊ ಉದ್ಯೋಗಕ್ಕೆ ಕಾರಣವಾಗುತ್ತವೆ. ಆದರೆ ಮಕ್ಕಳಲ್ಲಿ ದೇಶ ಮೊದಲು ಎನ್ನುವ ಅಭಿಮಾನವನ್ನು ಮೂಡಿಸುವ ಶಿಕ್ಷಣ ನೀಡಬೇಕು.ಸ್ವಯಂ ಶಿಸ್ತಿನ ಜೀವನವನ್ನು ರೂಪಿಸಿಕೊಳ್ಳುವಂಥ ಶಿಕ್ಷಣವನ್ನು ನೀಡಬೇಕಾಗಿದೆ ಎಂದರು.
ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ವಿ.ನಾಯ್ಕ, ನೌಕರರ ಸಂಘದ ತಾಲೂಕ ಅಧ್ಯಕ್ಷ ರಾಜೇಶ ನಾಯ್ಕ , ತಹಶೀಲ್ದಾರ ಸಂತೋಷ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ, ಕಳೆದ ಸಾಲಿನ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನೀಡುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನಿಸಲಾಯಿತು. ಕಳೆದ ಸಾಲಿನಲ್ಲಿ ಶೇ.100 ಫಲಿತಾಂಶ ಪಡೆದ 14 ಪ್ರೌಢಶಾಲೆಗಳಿಗೆ ಪುರಸ್ಕಾರಿಸಲಾಯಿತು. 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಗರಿಷ್ಠ ಅಂಕ ಪಡೆದ 6 ವಿದ್ಯಾರ್ಥಿಗಳ ಸನ್ಮಾನಿಸಲಾಯಿತು. ವಿಶೇಷ ಸಾಧನೆಯನ್ನು ಮಾಡಿರುವ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಗೌರವಿಸಲಾಯಿತು.
ಶಿಕ್ಷಕಿಯರಾದ ಸುಮಾ ಹೆಗಡೆ ಸಂಗಡಿಗರು ಪ್ರಾರ್ಥಿಸಿದರು. ಗುಲಾಬಿ ಸಂಘಡಿಗರು ನಾಡಗೀತೆ ಹಾಡಿದರು, ಸೀಮಾ ಮಡಿವಾಳ ಸಂಗಡಿಗರು ರೈತಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸ್ವಾಗತಿಸಿದರು. ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ ಕೆ.ಎಂ. ವಂದಿಸಿದರು, ಸುಮತಿ ನಾಯ್ಕ ಹಾಗೂ ಟಿ.ಎನ್.ಭಟ್ಟ ಕಾರ್ಯಕ್ರಮ ನಿರ್ವಹಿಸಿದರು.
ವೇದಿಕೆಯಲ್ಲಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಲೊಕೇಶ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಬಿ.ನಾಯ್ಕ, ತಾಲೂಕ ಕ.ಸಾ.ಪ ಅಧ್ಯಕ್ಷ ಗೋಪಾಲ ನಾಯ್ಕ ಬಾಶಿ,ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭೂವನೇಶ, ಬಿ.ಆರ್.ಸಿ ಚೈತನ್ಯಕುಮಾರ ಕೆ.ಎಂ, ತಾಲೂಕ ದೈಹಿಕ ಶಿಕ್ಷಣಾಧಿಕಾರಿ ರಾಜು ನಾಯ್ಕ,ಶಿಕ್ಷಕ ಸಂಘದ ಜಿಲ್ಲಾ ಪದಾಧಿಕಾರಿಗಳಾದ ಮಂಜುಳಾ ಪಟಗಾರ, ಬಸವರಾಜ ಕಡಪಟ್ಟಿ ಮೊದಲಾದವರು ಉಪಸ್ಥಿತರಿದ್ದರು.